ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ 52 ದಿನಗಳ ನಂತರ ಹಿಂದಕ್ಕೆ ಪಡೆದಿದೆ.
ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.
ಕರ್ತವ್ಯಲೋಪದ ಅಡಿಯಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು.