Publish Date: Tue, 26 Jul 2016 (11:03 IST)
Updated Date: Tue, 26 Jul 2016 (11:06 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಶೇಖಡಾ 10ಕ್ಕಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು ಕ್ಯಾಬಿನೆಟ್‌ನಲ್ಲಿ 8 ಪ್ರತಿಶತ ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 10 ಪ್ರತಿಶತ ವೇತನ ಹೆಚ್ಚಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಮೊದಲೇ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸಾರಿಗೆ ನೌಕರರು ಹೆಚ್ಚು ಹಠ ಮಾಡುವುದು ಒಳ್ಳೆಯದಲ್ಲ. ರಾಜ್ಯಾದ್ಯಂತ ಮುಷ್ಕರ ಹೂಡುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ಅರ್ಥಮಾಡಿಕೊಂಡು ಮುಷ್ಕರವನ್ನು ಕೈಬಿಟ್ಟು, ಸೇವೆಗೆ ಹಾಜರಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ