Select Your Language

Notifications

webdunia
webdunia
webdunia
webdunia

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ

Sampriya

ಮಂಗಳೂರು , ಭಾನುವಾರ, 17 ಆಗಸ್ಟ್ 2025 (10:36 IST)
Photo Credit X
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ಬಿಜೆಪಿ ನಿಯೋಗವು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿಯ ಸಂಸದರು, ಕರಾವಳಿ ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಎಸ್‍ಐಟಿ ತನಿಖೆಯನ್ನು ಬಿಜೆಪಿ ಪ್ರಾರಂಭದಲ್ಲೇ ಸ್ವಾಗತಿಸಿದೆ. ಅದರ ಮಧ್ಯಂತರ ವರದಿಯನ್ನು ಸರಕಾರ ಮಂಡಿಸಬೇಕು ಎಂದು ಸದನದಲ್ಲಿ ಆಗ್ರಹಿಸಿರುವುದಾಗಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವ ಕುರಿತು ಕೂಡ ಸರಕಾರ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ