Select Your Language

Notifications

webdunia
webdunia
webdunia
webdunia

ಮಹದಾಯಿ ತೀರ್ಪು: ಉತ್ತರ ಕರ್ನಾಟಕ ಸಂಪೂರ್ಣ ಸ್ತಬ್ಧ!

ಮಹದಾಯಿ ತೀರ್ಪು
ಬೆಂಗಳೂರು , ಗುರುವಾರ, 28 ಜುಲೈ 2016 (10:15 IST)
ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ ಅರ್ಜಿಯನ್ನು ಟ್ರಿಬ್ಯುನಲ್ ನ್ಯಾಯಾಧಿಕರಣ ವಜಾಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು ಇಂದು ಕಾರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.
 
ಮಹದಾಯಿ ನ್ಯಾಯಾಧಿಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಧಾರವಾಡ, ಗದಗ್, ಬೆಳಗಾವಿ ಹಾಗೂ ಬಾಗಲಕೋಟಿಯಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಯಿತ್ತು. 
 
ತೀರ್ಪು ವಿರೋಧಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ರೈತಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಇಂದು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಧಾರವಾಡ, ಗದಗ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಪ್ರತಿಭಟನಾಕಾರರು ಅಲ್ಲಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯನ್ನು ಮದುವೆಯಾಗಿ 50,000ಕ್ಕೆ ಮಾರಿದ