Publish Date: Sun, 16 Dec 2018 (19:48 IST)
Updated Date: Sun, 16 Dec 2018 (19:50 IST)
ತ್ರಿವಳಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಾಹಿತ್ಯಾಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಂಸ್ಕೃತಿಕ ಟ್ರಸ್ಟ್ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾಂವನಲ್ಲಿ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಎಂ. ಪಿ. ಮಂಜುನಾಥ ಕುನ್ನೂರು, ಸಂಗನ ಮಹಾಸ್ವಾಮಿಗಳು ಹಾಜರಿದ್ದರು.
ಇದೇ ಸಮಾರಂಭದಲ್ಲಿ ಮಕ್ಕಳಿಗಾಗಿ ಬೆಳಕು ತಂದ ಮಕ್ಕಳು ಎನ್ನುವ ಸಿಡಿಯನ್ನು ಬಿಡುಗಡೆಗೊಳಿಸಲಾಯಿತು. ಇನ್ನೂ ಜಿಲ್ಲೆಯ ಸಾಹಿತಿಗಳು, ಸಂಘಟನೆಗಳು, ಶಿಕ್ಷಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು.