Publish Date: Sun, 03 Jul 2022 (09:47 IST)
Updated Date: Sun, 03 Jul 2022 (09:39 IST)
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ.
ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.
ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ ಶಾಸಕ ಅಪ್ಪಚ್ಚು ರಂಜನ್ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.