Publish Date: Thu, 04 Jun 2026 (16:58 IST)
Updated Date: Thu, 04 Jun 2026 (17:00 IST)
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಂದು ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಬೆನ್ನಲ್ಲೇ ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರೊಬ್ಬರು ಅಧಿಕಾರದಿಂದ ಕೆಳಗಿಳಿಯುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭ ಅದಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕೆಂದು ತಿಳಿದಿರಲಿಲ್ಲ. ಆ ಸಂದರ್ಭದಲ್ಲಿ ನಾನು ಏನ್ ಹೇಳಿಕೆ ನೀಡಿದ್ದರೂ ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿತ್ತು. ಈ ಸಂಬಂಧನೇ ನಾನು ಮೌನಕ್ಕೆ ಜಾರಿದ್ದೆ ಎಂದು ಹೇಳಿದರು.
ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನಾಗಿದ್ದೇನೆ ಎಂದು ತಿಳಿಸಿದರು.
ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ