Webdunia - Bharat's app for daily news and videos

Install App

ಮೌನಕ್ಕೆ ಶರಣಾಗಿದ್ದಕ್ಕೆ ಟ್ರೋಲ್‌, ಕೊನೆಗೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್‌

ಸಂಪ್ರಿಯ
ಗುರುವಾರ, 4 ಜೂನ್ 2026 (16:58 IST)
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಂದು ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಬೆನ್ನಲ್ಲೇ ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರೊಬ್ಬರು ಅಧಿಕಾರದಿಂದ ಕೆಳಗಿಳಿಯುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭ ಅದಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕೆಂದು ತಿಳಿದಿರಲಿಲ್ಲ. ಆ ಸಂದರ್ಭದಲ್ಲಿ ನಾನು ಏನ್ ಹೇಳಿಕೆ ನೀಡಿದ್ದರೂ ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿತ್ತು. ಈ ಸಂಬಂಧನೇ ನಾನು ಮೌನಕ್ಕೆ ಜಾರಿದ್ದೆ ಎಂದು ಹೇಳಿದರು. 

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನಾಗಿದ್ದೇನೆ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಕೋಪದಲ್ಲಿ ಪತ್ನಿಯ ಹತ್ಯೆ, ತಾಯಿಗೆ ಕರೆ ಮಾಡಿ ಭಯದಲ್ಲಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ವಿಮಾನ ನಿಲ್ದಾಣದಲ್ಲಿ ಗನ್‌ ಪರಿಶೀಲನೆ ವೇಳೆ ಸಿಡಿದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ಮುಂದಿನ ಸುದ್ದಿ
Show comments