Select Your Language

Notifications

webdunia
webdunia
webdunia
webdunia

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Legislative Council member Suraj Revanna, abnormal sexual assault case, Court of People's Representatives

Sampriya

ಬೆಂಗಳೂರು , ಬುಧವಾರ, 3 ಡಿಸೆಂಬರ್ 2025 (09:59 IST)
Photo Credit X
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ‌ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ‌ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್ ನೀಡಿದೆ.

ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಈ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. 

ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಜಾಮೀನಿನ ಮೇಲೆ ಹೊರಗಿರುವ ಸೂರಜ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮಂಗಳವಾರ ಈ ಕುರಿತು ನ್ಯಾಯಾಲಯ  ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ