ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Sampriya
ಬುಧವಾರ, 3 ಡಿಸೆಂಬರ್ 2025 (09:59 IST)
Photo Credit X
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ‌ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ‌ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್ ನೀಡಿದೆ.

ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಈ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. 

ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಜಾಮೀನಿನ ಮೇಲೆ ಹೊರಗಿರುವ ಸೂರಜ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮಂಗಳವಾರ ಈ ಕುರಿತು ನ್ಯಾಯಾಲಯ  ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ