Publish Date: Sat, 08 Jul 2023 (16:07 IST)
Updated Date: Sat, 08 Jul 2023 (16:09 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಮಾತಾಡಿದ ಅವರು, ಅಂಕಿ ಅಂಶಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ, ಆದರೆ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಪ್ರಸ್ತಾಪಿಸುತ್ತಲೇ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಕುಟುಕಿದರು. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಕೇವಲ 18,000-20,000 ಕೋಟಿ ರೂ.ಗಳಷ್ಟು ಸಹಾಯ ಧನ, ಅನುದಾನದ ರೂಪದಲ್ಲಿ ಬರುತಿತ್ತು. ಆದರೆ ಈಗ 50,000 ಕೋಟಿ ರೂ.ಗಳಿಗಿಂತ ಜಾಸ್ತಿ ಬರುತ್ತಿದೆ ಎಂದು ರವಿ ಹೇಳಿದರು.