Publish Date: Sun, 20 Aug 2017 (13:48 IST)
Updated Date: Sun, 20 Aug 2017 (13:50 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ ದೂರಿನ ತನಿಖೆ ನಡೆಸುತ್ತಿರುವ ಎಸಿಬಿಯಿಂದ ಸತ್ಯ ಸಂಗತಿ ಹೊರಬೀಳಲಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ, ಸರಕಾರ ಯಾವುದೇ ಕಾರಣಕ್ಕೂ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ ತನಿಖಾ ಸಂಸ್ಥೆಯಾಗಿದ್ದು, ದುರ್ಬಳಕೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಯಡಿಯೂರಪ್ಪ ವಿರುದ್ಧ ಸರಕಾರ ದೂರು ದಾಖಲಿಸಿಲ್ಲ. ಖಾಸಗಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದೂರಿಗೂ ಸರಕಾರಕ್ಕೂ ಯಾವುದೇ ಸಂಬಂಧಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ.ಯಡಿಯೂರಪ್ಪ ಡಿನೋಟಿಫಿಕೇಶನ್ ಮಾಡಿರುವುದು ಸತ್ಯ ಎಂದು ಸಚಿವ ಕಾಗೋಡು ತಿಮ್ಮಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.