Publish Date: Tue, 17 Jul 2018 (20:12 IST)
Updated Date: Tue, 17 Jul 2018 (20:15 IST)
ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರು ಮುಖ್ಯಮಂತ್ರಿಯನ್ನ ಬಳಸಿಕೊಂಡು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಜಿ. ಎಸ್. ಬಸವರಾಜು ತುಮಕೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಹರಿಯುತ್ತಿರುವ ಹೇಮಾವತಿ ನೀರನ್ನ ರಾಮನಗರ, ಚೆನ್ನಪಟ್ಟಣಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ಮಾಡುತ್ತಿದ್ದಾರೆ. ಈ ಮೂಲಕ ತುಮಕೂರು ಜಿಲ್ಲೆಯ ಜನರಿಗೆ ಅನ್ಯಾಯ ಮಾಡಲು ಮುಂದಾಗಿದ್ದಾರೆ. ಜನರ ನಡುವೆ ಶಾಂತಿ ಕದಡುವ ಪ್ರಯತ್ನ ಅಣ್ಣ -ತಮ್ಮ ಮಾಡುತ್ತಿದ್ದಾರೆ ಇದನ್ನ ಖಂಡಿಸುತ್ತೇನೆ ಎಂದಿದ್ದಾರೆ.
ಗುಬ್ಬಿ ತಾಲ್ಲೂಕಿನಿಂದ ಕುಣಿಗಲ್ ಮಾರ್ಗವಾಗಿ ಹೇಮಾವತಿ ನಾಲೆಯಿಂದ ನೀರು ತೆಗೆದುಕೊಂಡು ಹೋಗುವ ಎಕ್ಸ್ ಪ್ರೆಸ್ ಕೆನಾಲ್ ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೋಜನೆ ಕೈ ಬಿಡದಿದ್ದರೆ ಜನರು ದಂಗೆ ಏಳುತ್ತಾರೆ. ಯೋಜನೆಗೆ ಮುಂದಾದ್ರೆ ಬಿಜೆಪಿ ಯಿಂದ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.