Select Your Language

Notifications

webdunia
webdunia
webdunia
webdunia

ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತೆ, ಬಾಗಿನ ಅರ್ಪಿಸೋಕೆ ನಾನು ಬರ್ತೀನಿ: ಸಿಎಂ ಸಿದ್ದರಾಮಯ್ಯ

Chief Minister Siddaramaiah

Sampriya

ಹೊಸಪೇಟೆ , ಮಂಗಳವಾರ, 13 ಆಗಸ್ಟ್ 2024 (19:27 IST)
Photo Courtesy X
ಹೊಸಪೇಟೆ: ತುಂಗಭದ್ರಾ ಜಲಾಶಯ ಗೇಟ್‌ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್  ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ  ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.

ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ: ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು  ರೈತರ ಜಮೀನಿಗೆ ಬಿಡಲಾಗಿದೆ.  ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಆಗಸ್ಟ್ 17 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ

ಕರ್ನಾಟಕದಲ್ಲಿ ಸುಮಾರು 9 ಲಕ್ಷ  ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17 ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ ಎಂದರು.

ಘಟನೆ ಬಗ್ಗೆ ವಿಶ್ಲೇಷಣೆ ಅಗತ್ಯ

ಕೆಲವರ್ಷಗಳಿಂದ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ . 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್  ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ  ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ

ನಮ್ಮ ರೈತರು ಬೇರೆಯಲ್ಲ, ನಿಮ್ಮ ರಾಜ್ಯದ ರೈತರು ಬೇರೆಯಲ್ಲ. ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳದಲ್ಲಿ ಉಪಸ್ಥಿತರಿದ್ದ ಆಂಧ್ರ, ತೆಲಂಗಾಣ ರಾಜ್ಯಗಳ ಕೃಷಿ ಸಚಿವರಿಗೆ ಸಿಎಂ ಭರವಸೆ ನೀಡಿದರು

Share this Story:

Follow Webdunia kannada

ಮುಂದಿನ ಸುದ್ದಿ

ಸೋದರ ಸೊಸೆ ಬೇರೆ ಮದುವೆಯಾಗುತ್ತಾಳೆಂದು ಗಂಡನನ್ನು ಬಿಟ್ಟು ಅವಳನ್ನೇ ಮದುವೆಯಾದ ಅತ್ತೆ