ತುಷಾರ್ ಗಾಂಧಿ ವಿವಾದಾತ್ಮಕ ಹೇಳಿಕೆ

Webdunia
ಮಂಗಳವಾರ, 22 ನವೆಂಬರ್ 2022 (17:51 IST)
ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೇ ನಾಥೂರಾಂ ಗೋಡ್ಸೆ ಅವರಿಗೆ ಬಾಪು ಅವರನ್ನು ಕೊಲ್ಲಲು ಸಮರ್ಥ ಬಂದೂಕನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಳಿಕ ಇದೀಗ ತುಷಾರ್ ಅವರ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ. ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಲ್ಲದೇ, ಬಾಪು ಅವರನ್ನು ಕೊಲ್ಲಲು ನಾಥೂರಾಂ ಗೋಡ್ಸೆಗೆ ಸಮರ್ಥ ಬಂದೂಕನ್ನು ಹುಡುಕಲು ಸಹಾಯ ಮಾಡಿದ್ದರು. ಬಾಪು ಹತ್ಯೆಗೂ 2 ದಿನಗಳ ಮೊದಲು ಗೋಡ್ಸೆ ಬಳಿ ಪ್ರಬಲವಾದ ಯಾವುದೇ ಶಸ್ತ್ರಗಳಿರಲಿಲ್ಲ ಎಂದು ತಿಳಿಸಿದ್ದಾರೆ. ಟ್ವೀಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತುಷಾರ್ ಗಾಂಧಿ, ತಮ್ಮ ಹೇಳಿಕೆಯನ್ನು ವಿವರಿಸಿದ್ದಾರೆ. ನಾನು ಯಾವುದೇ ಆರೋಪ ಮಾಡುತ್ತಿಲ್ಲ. ಇತಿಹಾಸದಲ್ಲಿ ದಾಖಲಾಗಿರುವುದನ್ನು ಹೇಳುತ್ತಿದ್ದೇನೆ. ಪೊಲೀಸ್ FIR ಪ್ರಕಾರ ನಾಥೂರಾಂ ಗೋಡ್ಸೆ ಮತ್ತು ವಿನಾಯಕ ಆಪ್ಟೆ ಸಾವರ್ಕರ್ ಅವರು 1948 ರ ಜನವರಿ 26, 27 ರಂದು ಭೇಟಿಯಾಗಿದ್ದರು. ಅವರ ಭೇಟಿಯಾಗುವವರೆಗೂ ಗೋಡ್ಸೆ ಬಳಿ ಬಂದೂಕು ಇರಲಿಲ್ಲ. ಅವರು ಬಂದೂಕು ಹುಡುಕುತ್ತಾ ಮುಂಬೈನಾದ್ಯಂತ ಸುತ್ತಾಡಿದ್ದಾರೆ. ಆದರೆ ಈ ಭೇಟಿಯ ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಿ, ಅಲ್ಲಿಂದ ಗ್ವಾಲಿಯರ್‌ಗೆ ಹೋದರು. ಅಲ್ಲಿ ಅವರಿಗೆ ಒಳ್ಳೆಯ ಪಿಸ್ತೂಲ್ ಸಿಕ್ಕಿದೆ. ಇದೆಲ್ಲವೂ ಬಾಪು ಹತ್ಯೆಯ 2 ದಿನಗಳ ಮೊದಲು ನಡೆದಿದೆ. ಇದು ಆರೋಪ ಅಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಸನ್ನೆ, 7ಮಂದಿ ವಿರುದ್ಧ ದೂರು

2 ಮದುವೆಯಾಗಿದ್ದರೂ ಮತ್ತೊಂದು ಲಿವ್‌ ಇನ್ ರಿಲೇಶನ್‌, ಪ್ರೇಯಸಿಯ ಬಯಕೆ ಈಡೇರಿಸಕ್ಕಾಗದೆ ಪಾಪಿ ಹೀಗೇ ಮಾಡೋದಾ

ಪೋಕ್ಸೋ ಸಂತ್ರಸ್ತೆ ಹೆಸರು, ವಿಳಾಸ ಬಹಿರಂಗ, ಶ್ರೀರಾಮಲು ವಿರುದ್ಧ ದೂರು

ಮುಂದಿನ ಸುದ್ದಿ
Show comments