Publish Date: Fri, 10 Jun 2022 (19:33 IST)
Updated Date: Fri, 10 Jun 2022 (19:36 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ಇಲಾಖೆಯು ನಾಗರೀಕರಿಗೆ ಮತ್ತು ತೆರಿಗೆದಾರರಿಗೆ ಖಾತೆ ನೊಂದಾವಣೆ, ವಿಭಜನೆ, ಒಂದುಗೂಡಿಸುವಿಕೆ, ವರ್ಗಾವಣೆ ಸೇರಿದಂತೆ ಇನ್ನಿತ್ಯಾದಿ ಹಲವಾರು ಸೇವೆಗಳನ್ನು ನೀಡುತ್ತಿದೆ. ಈ ಸಂಬಂಧ ಪಾಲಿಕೆಯ ಅಧಿಕಾರಿಗಳು ಮತ್ತುನೌಕರರುಗಳು ನಿರ್ವಹಿಸುತ್ತಿರುವ ಕೆಲಸ ಕಾರ್ಯಗಳಲ್ಲಿ ಸರಳೀಕರಣ ಮತ್ತು ಸುಧಾರಣೆಗಳನ್ನೊಳಗೊಂಡಂತೆ, ಎಲ್ಲಾ ವಲಯಗಳಲ್ಲಿಯೂ ಏಕರೂಪ ಪದ್ಧತಿಯನ್ನು ಜಾರಿಗೆ ತರುವ ಉದ್ದೇಶದಿಂದ ಪಾಲಿಕೆಯ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ಮೌಲ್ಯ ಮಾಪಕರು, ಕಂದಾಯ ಪರಿವೀಕ್ಷಕರು, ಕಂದಾಯ ವಸೂಲಿಗಾರರಿಗೆ ಇಂದು ಪಾಲಿಕೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಏರ್ಪಡಿಸಿದ್ದ ಕಾರ್ಯಗಾರಕ್ಕೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದರು.