Publish Date: Tue, 30 Jun 2020 (19:11 IST)
Updated Date: Tue, 30 Jun 2020 (19:12 IST)
ಈ ಹಿಂದೆ ಟಿವಿ 9 ವಾಹಿನಿಯಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡಿದ್ದ ವ್ಯಕ್ತಿಯೊಬ್ಬರು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ವಾಹಿನಿಗಳಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡಿಕೊಂಡಿದ್ದ ಹಣಮಂತರಾವ ಎಸ್.ಟಿ (41) ಆತ್ಮಹತ್ಯೆ ಮಾಡಿಕೊಂಡವರು.
ಕಲಬುರಗಿ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ಹತ್ತಿರದ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಸ್ತುತ ಬೆಂಗಳೂರು ಮೂಲದ ಮೈಡ್ರೀಮ್ಸ್ ಮೆಟ್ರೋ ಚಾನಲ್ ನ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಆಗಿ ಹಣಮಂತರಾವ್ ಕೆಲಸ ಮಾಡುತ್ತಿದ್ದರು.