Publish Date: Fri, 15 Dec 2017 (09:38 IST)
Updated Date: Fri, 15 Dec 2017 (09:42 IST)
ಬೆಂಗಳೂರು: ಬಿಜೆಪಿ ಜಿಲ್ಲಾಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿಬಂದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಲು ಮುಂದಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಯೋಗೀಶ್ ಗೌಡ ಪತ್ನಿ ಮಲ್ಲಮ್ಮರನ್ನು ತಮ್ಮ ಪಕ್ಷ ಸೇರುವಂತೆ ಕಾಂಗ್ರೆಸ್ ಒತ್ತಡ ಹೇರಲಾಗುತ್ತಿದೆ ಎಂದು ಮಾಧ್ಯಮ ವರದಿ ಹೇಳಿದೆ. ಇದೀಗ ಜಾತಿ ಹೆಸರಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲು ಸಚಿವ ವಿನಯ್ ಕುಲಕರ್ಣಿ ಶಿರಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮೂಲಕ ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ ಎಂದು ಮಾಧ್ಯಮ ವರದಿ ಹೇಳಿದೆ.
ಈ ಬಗ್ಗೆ ಯೋಗೀಶ್ ಗೌಡ ಪತ್ನಿ ಮಲ್ಲಮ್ಮರನ್ನು ಖಾಸಗಿ ಹೋಟೆಲ್ ಒಂದಕ್ಕೆ ಕರೆಸಿ ಅಲ್ಲಿ ಬೆಂಬಲಿಗರ ಮೂಲಕ ವಿನಯ್ ಕುಲಕರ್ಣಿ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ