ಗುಂಪು ಘರ್ಷಣೆ ಮತ್ತು ಲಿಂಚಿಂಗ್‌ನಂತಹ (ಗುಂಪು ಹಲ್ಲೆ) ದುಷ್ಕೃತ್ಯಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲವು ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್‌ಗೆ ಆದೇಶಿಸಲಾಗಿದೆ' ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಸುಳ್ಳು ಸುದ್ದಿ ಹಾಗೂ ಉದ್ದೇಶಪೂರ್ವಕ ಅಸಂಬದ್ಧ ಮಾಹಿತಿಗಳ ಪ್ರಸರಣ ಮತ್ತು ಹಂಚಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಟ್ವಿಟರ್ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ದೇಶದ ಸಮಗ್ರತೆ, ಸಾರ್ವಭೌಮತೆ, ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಗಳ ಪ್ರಸರಣ ಇಂತಹ ವೇದಿಕೆಗಳಲ್ಲಿ ಹೆಚ್ಚಾಗುತ್ತಿವೆ' ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.
'ದೇಶ ವಿರೋಧಿ ಮತ್ತು ವಿದೇಶದಲ್ಲಿರುವ ಶತ್ರುಗಳು ಭಾರತ ವಿರೋಧಿ ಅಪಪ್ರಚಾರಕ್ಕೆ ಇಂತಹವುಗಳನ್ನು ವೇದಿಕೆಯನ್ನಾಗಿ ಮಾಡಿಕೊಳ್ಳುತ್ತಿವೆ. ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಏಕತೆಯಲ್ಲಿ ಬಿರುಕು ಮೂಡಿಸಲು ಇವನ್ನು ಬಳಸಿಕೊಳ್ಳಲಾಗುತ್ತಿದೆ.