Publish Date: Mon, 31 Dec 2018 (11:54 IST)
Updated Date: Mon, 31 Dec 2018 (11:59 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಮಧ್ಯೆ ಟ್ವಿಟರ್ ನಲ್ಲಿ ವಾರ್ ಶುರುವಾಗಿದೆ.
ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ. . ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸದಾನಂದ ಗೌಡ ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ. ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ ಎಂದು ಪ್ರತಿಕ್ರಿಯಿಸಿದ್ದರು.
ಇದಕ್ಕೆ ರಿಟ್ವೀಟ್ ಮಾಡಿದ ಸಿದ್ದರಾಮಯ್ಯ, ಎಷ್ಟೆಂದರೂ ನೀವು 11 ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿ ಹೋದವರಲ್ಲವೇ ಅಂತ ಬರೆದು ಕೇಂದ್ರ ಸಚಿವರಿಗೆ ಟ್ಯಾಗ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ