ಬೆಂಗಳೂರು (ಕರ್ನಾಟಕ): ತನ್ನ ಸಹೋದರನೊಂದಿಗೆ ಊಟಕ್ಕೆಂದು ಹೋಗುತ್ತಿದ್ದ ಮಹಿಳೆ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನಗರದ ಮಹದೇವಪುರ ಪ್ರದೇಶದಲ್ಲಿ ನಡೆದಿದೆ.
ಶೀಘ್ರ ಕ್ರಮ ಕೈಗೊಂಡ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊರವಲಯದಲ್ಲಿರುವ ಲಾರಿ ಮೆಮೋರಿಯಲ್ ಶಾಲೆಯ ಬಳಿ ಈ ಘಟನೆ ಸಂಭವಿಸಿದೆ. ಇಬ್ಬರು ಆಟೋ ಚಾಲಕರು ಮಹಿಳೆಯ ಸಹೋದರನ ಮೇಲೆ ಹಲ್ಲೆ ನಡೆಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದು, ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.