ಎರಡು ದಿನಗಳ ಕಾಲ ಮುಷ್ಕರದ ಹಿನ್ನಲೆ; ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

Webdunia
ಸೋಮವಾರ, 7 ಜನವರಿ 2019 (12:31 IST)
ಬೆಂಗಳೂರು : ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿವೆ. ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ನಡೆಯುವ ಈ ಮುಷ್ಕರದಲ್ಲಿ  ರಾಜ್ಯದ ಹಲವು ಕಾರ್ಮಿಕ ಸಂಘಟನೆಗಳು, ಎಲ್ಲಾ ಕಾರ್ಮಿಕರು ಭಾಗಿಯಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಇನ್ನೂ ಸರ್ಕಾರಿ ಶಾಲೆಗಳಿಗೆ ಭಾರತ್ ಮುಷ್ಕರ ಹಿನ್ನೆಲೆ ರಜೆ ಘೋಷಣೆ ಮಾಡಿಲ್ಲ.


ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್, ‘ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಾವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲು ತಿರ್ಮಾನಿಸಿದ್ದೇವೆ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಾಳೆ, ನಾಡಿದ್ದು ಎರಡು ದಿನಗಳು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments