ಮಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿ

ಭಾನುವಾರ, 28 ಜೂನ್ 2020 (10:05 IST)
ಮಂಗಳೂರು : ಮಂಗಳೂರಿನಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಮಂಗಳೂರಿನಲ್ಲಿ ಕೊರೊನಾಗೆ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ನ 31 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವನಪ್ಪಿದ್ದು, ಮಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ಯುವಕ ಸಾವನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆ ಮೂಲಕ ದಕ್ಷಿಣ ಕನ್ನಡದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಲು ಒತ್ತಾಯ