Select Your Language

Notifications

webdunia
webdunia
webdunia
webdunia

ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ

ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ
bangalore , ಮಂಗಳವಾರ, 27 ಡಿಸೆಂಬರ್ 2022 (21:36 IST)
ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ರೂ, ಮಾದಕ ಜಾಲಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​ ಬಿದ್ದಿಲ್ಲ. ಈ ನಡುವೆ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 31 ಗ್ರಾಂ MDMA, ECSTASY TABLETS ಮತ್ತು LSD ಡ್ರಗ್ಸ್, 5 ಸಾವಿರ ನಗದು, 2 ಮೊಬೈಲ್, 1 ಬೈಕ್ ವಶಕ್ಕೆ ಪಡೆದಿದ್ದಾರೆ. ಬಂಧಿತರ ಪೈಕಿ 1ನೇ ಆರೋಪಿ ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. 2ನೇ ಆರೋಪಿ ವಕೀಲ ವೃತ್ತಿ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಆರೋಪಿಗಳು ಮಾದಕ ವಸ್ತುಗಳನ್ನು ಎಲ್ಲಿಂದ ತಂದು, ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯಯುತ್ತಿದೆ. ಈ ಸಂಬಂಧ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಶ್ರಯ ಕೊಟ್ಟ ಅಣ್ಣನ ಮನೆಯಲ್ಲೇ ಕಳ್ಳತನ