ಸುಳೇಗಾಳಿ ಗ್ರಾಮದಲ್ಲಿ ಎರಡು ಆನೆ ಸಾವು, ಸಚಿವ ಈಶ್ವರ್ ಖಂಡ್ರೆ ಕೊಟ್ರು ಖಡಕ್ ವಾರ್ನಿಂಗ್‌

Sampriya
ಸೋಮವಾರ, 3 ನವೆಂಬರ್ 2025 (14:52 IST)
ಬೆಳಗಾವಿ: ಇಲ್ಲಿನ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ನೋವು ವ್ಯಕ್ತಪಡಿಸಿ, ತನಿಖೆಗೆ ಆದೇಶ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಪ್ರದೇಶದಲ್ಲಿ ಆನೆಗಳು ಓಡಾಟ ನಡೆಸುತ್ತಿದ್ದರು, ಅರಣ್ಯ  ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ. 

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸಚಿವರು ಖಡಕ್ ಸೂಚನೆ ನೀಡಿದ್ದಾರೆ.  

ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ. 

ಪ್ರಕರಣದ ಹಿನ್ನೆಲೆ: 
ಖಾನಾಪುರ ತಾಲೂಕಿನ ಸುಳೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಜೋಡಾಣೆ ಸಾವನ್ನಪ್ಪಿದವು. 

ಆನೆಗಳ ಹಿಂಡಿನಿಂದ ಬಂದ ಸರಿಸುಮಾರು ನಾಲ್ಕು ವರ್ಷಗಳ ವಯಸ್ಸಿನ ಒಂದು ಗಂಡು, ಒಂದು ಹೆಣ್ಣು ಆನೆ ಮೃತಪಟ್ಟಿದ್ದವು. ಘಟನೆ ತಿಳಿಯುತ್ತಿದ್ದಂತೆ ನಾಗರಗಾಳಿ ವಲಯದ ಆರ್‌ಎಫ್‌ಓ ಸಚೀನ ಹೊನಮನಿ, ಡಿಎಫ್‌ಓ ಕ್ರಾಂತಿ ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ ನಡೆಸಲಾಗಿತ್ತು. ಮೃಗಾಲಯ ವೈದ್ಯ ನಾಗೇಶ ಹುಯಿಲಗೋಳ ಮರಣೋತ್ತರ ಪರಿಕ್ಷೆ ನಡೆಸಿದ್ದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments