Select Your Language

Notifications

webdunia
webdunia
webdunia
webdunia

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

Madikeri Two Workers Death Case
ಮಡಿಕೇರಿ: ಬೃಹತ್ ಮರ ಬಿದ್ದು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ ಧಾರುಣ ಘಟನೆ  ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ವರದಿಯಾಗಿದೆ. 

ಮೃತ ದುರ್ದೈವಿಗಳನ್ನು ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48)  ಎಂದು ಗುರುತಿಸಲಾಗಿದೆ.

ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 


ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಗಾಲದ ಹಿನ್ನೆಲೆ ಮರಗಳು ದುರ್ಬಲಗೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ ಎಂಬ ಮಾತುಗಳು ಕೇಳಿಬರುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video