Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮೈಸೂರು: ವಾರದ ಅಂತರದಲ್ಲಿ ಇಬ್ಬರು ಕಾಮುಕರಿಗೆ ಕಠಿಣ ಶಿಕ್ಷೆ!​

webdunia
ಸೋಮವಾರ, 6 ಸೆಪ್ಟಂಬರ್ 2021 (17:21 IST)
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಜಿಲ್ಲಾ ಸತ್ರ ನ್ಯಾಯಾಲಯ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಾಮುಕರಿಗೆ ಕಠಿಣ ಶಿಕ್ಷೆ ಜಾ
ರಿ ಮಾಡಿ ಎಚ್ಚರಿಕೆ ಸಂದೇಶ ರವಾನಿಸಿದೆ.
ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಭಾನುಮತಿ ಮಹತ್ವದ ತೀರ್ಪು ನೀಡಿದ್ದು, ಚಿಕ್ಕಬಳ್ಳಾಪುರ ಮೂಲದ ನರಸಿಂಹ ಮೂರ್ತಿಗೆ 12 ವರ್ಷ ಜೈಲು ಹಾಗೂ ಚಿಂತಾಮಣಿ ಮೂಲದ ಕುಮಾರ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಸೆಪ್ಟೆಂಬರ್ ಒಂದರಂದು ನರಸಿಂಹ ಮೂರ್ತಿಗೆ ಶಿಕ್ಷೆ ವಿಧಿಸಿ ಆದೇಶ ನೀಡಲಾಗಿದ್ದು, ಇಂದು ಕುಮಾರ್ ಎಂಬುವನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಲಾಗಿದೆ.
2014 ರಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಶಿಕ್ಷೆ ಜೊತೆಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ರಾಜ್ಯದಲ್ಲಿ ಕುಸಿದ ಕೊರೊನಾ: 973 ಪಾಸಿಟಿವ್ ಪತ್ತೆ, 17 ಮಂದಿ ಸಾವು