Select Your Language

Notifications

webdunia
webdunia
webdunia
webdunia

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ
ಮೈಸೂರು , ಶುಕ್ರವಾರ, 20 ಅಕ್ಟೋಬರ್ 2017 (18:05 IST)
ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಊರಿನವರಿಗೆ ತಿಳಿಸಬೇಕಾಗುತ್ತದೆ ಎಂದು ಮತ್ತೊಬ್ಬ ಅತ್ಯಾಚಾರವೆಸಗಿದ್ದಾನೆ. ಇದರಿಂದಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.

ಚಲುವರಾಜು ಎಂಬಾತ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಇವರಿಬ್ಬರ ಸಂಬಂಧದ ಬಗ್ಗೆ ಗೊತ್ತಿದ್ದ ಅದೇ ಕಾಲೋನಿಯ ವಿಜಯ್ ಕುಮಾರ್ ಇಬ್ಬರ ಸಂಬಂಧದ ಬಗ್ಗೆ ಊರಿನವರಿಗೆ ಹೇಳುತ್ತೇನೆ ಎಂದು ಅಪ್ರಾಪ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸದ್ಯ ಅಪ್ರಾಪ್ತೆ ಈಗ ಗರ್ಭಿಣಿಯಾಗಿದ್ದಾಳೆ. ಅಪ್ರಾಪ್ತೆ ಗರ್ಭಿಣಿ ಎಂಬ ವಿಷಯ ತಿಳಿದ ಇಬ್ಬರೂ ಆರೋಪಿಗಳು ಕಾಲೋನಿ ಬಿಟ್ಟು ಪರಾರಿಯಾಗಿದ್ದಾರೆ. ನೊಂದ ಅಪ್ರಾಪ್ತೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಕಾಮುಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇದಾರನಾಥದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ