Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಇಬ್ಬರು ಶಾಸಕ, ಸಚಿವರ ರಾಸಲೀಲೆ ಸಿಡಿ ಬಿಡುಗಡೆ: ರಾಜಶೇಖರ್

Webdunia
ಶುಕ್ರವಾರ, 23 ಡಿಸೆಂಬರ್ 2016 (09:37 IST)
ರಾಜ್ಯದ ಇಬ್ಬರು ಶಾಸಕರು ಹಾಗೂ ಪ್ರಭಾವಿ ಸಚಿವರ ರಾಸಲೀಲೆ ಸಿಡಿ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಆ ಸಿಡಿಗಳನ್ನು ಶ್ರೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.
 
ಧಾರವಾಡದ ಕಲಾಕ್ಷೇತ್ರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿ ಅಷ್ಟೇ ಇಲ್ಲ ಅಂತಹ ಸಾಕಷ್ಟು ಜನ ಪ್ರತಿನಿಧಿಗಳು ದೃಷ್ಕೃತ್ಯದಲ್ಲಿ ತೊಡಗಿರುವ ಮಾಹಿತಿ ನನ್ನ ಬಳಿ ಇವೆ. ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಹೋರಾಟ ಮಾಡುತ್ತೇವೆ ಎಂದು ಎಚ್ಚರ ನೀಡಿದ್ದರು. 
 
ಈ ಕುರಿತು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನೂ ಭೇಟಿ ಮಾಡಿ ಹೋರಾಟದ ಬಗ್ಗೆ ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ಭ್ರಷ್ಟಾಚಾರ ನಿರ್ಮೂಲನೆಗೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ತಿಳಿಸಿದ್ದಾರೆ.
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments