Publish Date: Sat, 12 Nov 2022 (14:11 IST)
Updated Date: Sat, 12 Nov 2022 (14:15 IST)
ಬೆಂಗಳೂರಿನಲ್ಲಿ ಚುಮು ಚುಮು ಚಳಿಯನ್ನು ಬೆಂಗಳೂರನ್ನ ಜನರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.ಜಿಟಿ ಜಿಟಿ ಮಳೆಯ ನಡುವೆ ಬೆಳ್ಳಂ ಬೆಳ್ಳಿಗೆ ಇಂದಲೇ ಬೆಂಗಳೂರಿಗರು ಆಫೀಸ್ ಗೆ ಹೊರಟಿದ್ದರು.ಇನ್ನು ಎರಡು ದಿನ ವಾತಾವರಣ ಹೀಗೆ ಇರಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಿದೆ.ನೆನ್ನೆಯಿಂದಲೂ ಐಟಿ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ.ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ.ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 13, 14 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ.ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.