Publish Date: Fri, 04 Nov 2022 (17:33 IST)
Updated Date: Fri, 04 Nov 2022 (17:46 IST)
ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು ಹಾಗೂ ಆನಂದ್ ಮೃತ ಪಟ್ಟಿದ್ದಾರೆ. ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ಘಟನೆ ಸಂಭವಿಸಿದೆ. ಸಿಹಿ ತಿಂಡಿ ತಯಾರಿಸುವ ಕೆಲಸಕ್ಕೆ ಹಣ ಪಡೆದು ಕೆಲಸಕ್ಕೆ ಹೋಗದ ಕಾರಣ ಗಂಗೆ ಮೇಲೆ ಆಣೆ ಮಾಡಲು ತೆರಳಿದ್ದ ಇಬ್ಬರು ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋದಾಗ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳೀಯರು ಬೆಳಗ್ಗೆ ಶವ ಹೊರ ತೆಗೆದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.