Select Your Language

Notifications

webdunia
webdunia
webdunia
webdunia

ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವು : ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ

ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವು : ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ
bangalore , ಭಾನುವಾರ, 24 ಜುಲೈ 2022 (15:05 IST)
ಬೆಳ್ಳಂಬೆಳಗ್ಗೆ ಚಿತ್ತೂರು ಸಮೀಪ, ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಮರಣಹೊಂದಿ, ಇತರ ಐದು ಸಿಬ್ಬಂದಿಗಳು ಗಾಯಗೊಂಡ ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
 
ಇವರೆಲ್ಲರೂ ಬೆಂಗಳೂರಿನ ಶಿವಾಜಿನಗರದ ಪೊಲೀಸ್ ಠಾಣೆಯ ಸಿಬ್ಬಂದಿ ಗಳಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು. ಗಾಯಗೊಂಡ ಸಿಬ್ಬಂದಿಗಳ ನೆರವಿಗೆ ಧಾವಿಸಿ,  ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು ಎಂದೂ ಸೂಚಿಸಿದ್ದಾರೆ. 
 
ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ, ಎಂದೂ ಸಚಿವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣಿಕರ ದರದಲ್ಲಿ ರಿಯಾಯಿತಿ ಇಲ್ಲ