ಬೆಂಗಳೂರು: ರಸ್ತೆಗಳಲ್ಲಿ ಹೋಗುವ ದ್ವಿಚಕ್ರವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಕೆಜಿಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಡಿಜೆಹಳ್ಳಿಯ ನಿವಾಸಿ ಮಧುರಾಜ್ (23), ಸುಜಯ್ (23) ಬಂಧಿತರು.
ಆರೋಪಿಗಳು ದ್ವಿಚಕ್ರವಾಹನದಲ್ಲಿ ಬರುವವರನ್ನು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು. ಇದರಿಂದ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು. ಫೆಬ್ರವರಿ 22ರಂದು ರಾತ್ರಿ ಡೆಲಿವರಿ ಬಾಯ್ ವೆಂಕಟೇಶ್ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದಾಗ ಬಿಲಾಲ್ ಮಸೀದಿ ಪಕ್ಕದಲ್ಲಿರುವ ರಸ್ತೆಯಲ್ಲಿ ಇವರನ್ನು ಆರೋಪಿಗಳು ಅಡ್ಡಗಟ್ಟಿದ್ದರು ಎಂದು ಪ್ರಕರಣದ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಸಿಕ್ಯಾಮರಾದಲ್ಲಿ ಮುಕಚಹರೆ ಪತ್ತೆ:
ವೆಂಕಟೇಶ್ನಿಂದ 1,200 ರೂ. ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಕೆಜಿಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಕ್ಯಾಮರಾ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ