Select Your Language

Notifications

webdunia
webdunia
webdunia
Saturday, 5 April 2025
webdunia

ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

Two terrorists killed in Baramulla
ಜಮ್ಮು ಕಾಶ್ಮೀರ , ಶುಕ್ರವಾರ, 30 ಸೆಪ್ಟಂಬರ್ 2022 (20:25 IST)
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ  ನಡುವೆ ಗುಂಡಿನ ಚಕಮಕಿ ನಡೆಯಿತು. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಭಯೋತ್ಪಾದಕರ ಎನ್‌ಕೌಂಟರ್ ನಡೆದಿದೆ. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ಮಾಡುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು, ಇಂದು ಮುಂಜಾನೆ ಶೋಪಿಯಾನ್ ಜಿಲ್ಲೆಯ ಚಿತ್ರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್‌ಕೌಂಟರ್ ಪ್ರಾರಂಭವಾಗಿತ್ತು. ಬುಧವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ  ಜೊತೆಗೆ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ಜಿಲ್ಲೆಯ ಅವ್ಹೋಟು ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಎನ್‌ಕೌಂಟರ್ ಸ್ಥಳದ ಶೋಧ ಕಾರ್ಯವನ್ನು ಆರಂಭಿಸಲಾಗಿದೆ.ಎರಡು AK ಸರಣಿ ರೈಫಲ್‌ಗಳು, ಗ್ರೆನೇಡ್‌ಗಳು ಮತ್ತು ಇತರ ಯುದ್ಧೋಚಿತ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ