ದ್ವಿಚಕ್ರ ವಾಹನ ಡಿಕ್ಕಿ; ಮೂವರಿಗೆ ಗಾಯ

Webdunia
ಭಾನುವಾರ, 9 ಜುಲೈ 2023 (16:00 IST)
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಅನಂತಪುರ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ವಿಡಿಯೋ ಪಕ್ಕದಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿ ಹೊಡೆದ ಬೈಕ್​ನಲ್ಲಿದ್ದವರಿಗೂ ಗಾಯಗಳಾಗಿವೆ. ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಕಾಲೇಜು ವಿದ್ಯಾರ್ಥಿನಿ ಬರುತ್ತಿದ್ದಳು. ಇದೇ ಸಮಯಕ್ಕೆ ಮತ್ತೊಂದು ಬೈಕ್​ನಲ್ಲಿ ಎದುರು ಬಂದ ಇಬ್ಬರು ಯುವಕರು ಅಡ್ಡಾ-ದಿಡ್ಡಿ ಬಂದು ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸದ ಭಯಾನಕ ದೃಶ್ಯ ಪಕ್ಕದಲ್ಲಿದ್ದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಒಮ್ಮೆ ಝಲ್​ ಎನಿಸುವಂತಿದೆ. ಘಟನೆ ತಕ್ಷಣವೇ ಅಲ್ಲೆ ಇದ್ದ ಸ್ಥಳೀಯರು ಗಾಯಾಳು ವಿದ್ಯಾರ್ಥಿನಿ ಹಾಗೂ ಯುವಕರನ್ನು ರಕ್ಷಿಸಿ ಯಲಹಂಕ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲಹಂಕ‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments