Webdunia - Bharat's app for daily news and videos

Install App

ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು

Webdunia
ಸೋಮವಾರ, 21 ಫೆಬ್ರವರಿ 2022 (20:41 IST)
ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಚಾಲಾಕಿ ಖದೀಮನನ್ನು ಕೆಂಗೇರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಕೋಲಾರ ಚಿಂತಾಮಣಿ ಮೂಲದ ವೆಂಕಟಸ್ವಾಮಿ (38) ಬಂಧಿತ. ಆರೋಪಿ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ 6.70 ಲಕ್ಷ ರೂ. ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
 ಆರೋಪಿಯು ಇತ್ತೀಚೆಗೆ ಕೆಂಗೇರಿ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುವಾಗ ಪೆÇಲೀಸರು ಗಮನಿಸಿ, ವಶಕ್ಕೆ ಪಡೆದು ಪ್ರಶ್ನಿಸಿದಾಗ ದುಷ್ಕøತ್ಯಗಳು ಬೆಳಕಿಗೆ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯು ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ. ಬಳಿಕ ಆಂಧ್ರಗಡಿ ಭಾಗಗಳಲ್ಲಿ ಗಿರಾಕಿಗಳನ್ನು ಹುಡುಕಿ 5-10 ಸಾವಿರ ರೂ.ಗೆ ದ್ವಿಚಕ್ರವಾಹನ ಮಾರಾಟ ಮಾಡಿ ಹಣ ಪಡೆಯುತ್ತಿದ್ದ. ಬಳಿಕ ಆ ಹಣವನ್ನು ಮೋಜು-ಮಸ್ತಿ ಮಾಡುವುದಕ್ಕಾಗಿ ವ್ಯಯಿಸುತ್ತಿದ್ದ. ಆರೋಪಿಯ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ 70 ಅಧಿಕ ಕಳವು ಪ್ರಕರಣ ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ, ಜಾಮೀನು ಪಡೆದು ಹೊರಬಂದ ಬಳಿಕವೂ ತನ್ನ ಹಳೇ ಚಾಳಿ ಮುಂದುವರಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಪೆÇಲೀಸರು ತಿಳಿಸಿದರು. 
ವೆಂಕಟಸ್ವಾಮಿ ಬಂಧನದಿಂದ ಕೆಂಗೇರಿ, ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತು ಜ್ಞಾನಭಾರತಿ ಪೆÇಲೀಸ್ ಠಾಣೆಗಳಲ್ಲಿ  ದಾಖಲಾಗಿದ್ದ 12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments