ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್‌ಪ್ರೆಸ್ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ದುರಂತ ಸಂಭವಿಸಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.