Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಹಳಿ ದಾಟುತ್ತಿದ್ದಾಗ ಕ್ಷಣಾರ್ಧದಲ್ಲಿ ದುರ್ಮರಣಕ್ಕೀಡಾದ ಇಬ್ಬರು ಮಹಿಳೆಯರು

webdunia
ಶನಿವಾರ, 21 ಆಗಸ್ಟ್ 2021 (11:40 IST)
ಮಂಗಳೂರು: ರೈಲ್ವೆ ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಮಾಹಾಕಾಳಿ ಪಡ್ಪು ಎಂಬಲ್ಲಿ ಸಂಭವಿಸಿದೆ.

ಬೀಡಿ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು, ಇಂದು ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.
ರೈಲು ಬರುವುದು ಗೊತ್ತಾಗದೇ ಮಹಿಳೆಯರು ರೈಲ್ವೆ ಹಳಿ ದಾಟಲು ಮುಂದಾಗಿದ್ದಾರೆ. ಕ್ಷಣಾರ್ಧದಲ್ಲಿ ರೈಲು ಬಂದೇಬಿಟ್ಟಿದ್ದು, ಇಬ್ಬರು ಮಹಿಳೆಯರಿಗೆ ಡಿಕ್ಕಿಹೊಡೆದಿದೆ. ನೋಡ ನೋಡುತ್ತಿದ್ದಂತೆಯೇ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಓಣಂ ಹಬ್ಬದ ಸಂಭ್ರಮದಲ್ಲಿ ಕೇರಳ