ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
									
										
								
																	
	ಕಳೆದ ಆಗಸ್ಟ್ 31 ರಂದು ಇಬ್ಬರು ಯುವಕರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
 
									
			
			 
 			
 
 			
					
			        							
								
																	
	 
	21 ವರ್ಷ ವಯಸ್ಸಿನ ಮುತ್ತಪ್ಪ ಮತ್ತು ಸಂತೋಷ್ ಎನ್ನುವ ಯುವಕರು, ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪವೊಡ್ಡಿ ಅಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ. 
 
									
										
								
																	
	 
	ಬಾಲಕಿಯನ್ನು ನಗರದ ಹೊರವಲಯದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ನಂತರ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
 
									
											
									
			        							
								
																	
	 
	ನಿನ್ನೆ ಸಂತ್ರಸ್ಥ ಬಾಲಕಿ ಪೋಷಕರೊಂದಿಗೆ ತೆರಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣದ ದೂರು ದಾಖಲಿಸಿದ್ದಾಳೆ.
 
									
			                     
							
							
			        							
								
																	
	 
	ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಮುತ್ತಪ್ಪ ಮತ್ತು ಸಂತೋಷ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
									
			                     
							
							
			        							
								
																	
	 
	ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
									
			                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.