Select Your Language

Notifications

webdunia
webdunia
webdunia
webdunia

ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ

basavaraj bommai
ಗದಗ: ಮಹಾರಾಷ್ಟ್ರದ ಪೊಲೀಸರು ರಾಜ್ಯಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹಚ್ಚುತ್ತಾರೆ ಎಂದಾಗ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ಗನಲ್ಲಿ ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆಯೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಗದಗದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ, ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಡ್ರಗ್ಸ್ ಬಳಕೆ ಹೆಚ್ಚಿದ್ದು, ಅದನ್ನು ನಿಯಂತ್ರಿಸಲು ಸರ್ಕಾರ ಸ್ಪೆಷಲ್ ಸ್ಕ್ಯಾಡ್ ಮಾಡಿದ್ದಾರೆ. ಪೊಲೀಸರ ಭಯ ಇಲ್ಲದಿದ್ದು, ಇದೀಗ ಕೆಲವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದಕ್ಕಾಗಿ ವಿಶೇಷ ಕಾನೂನಿದೆ. ಅದನ್ನು ಬಳಕೆ ಮಾಡುತ್ತಿಲ್ಲ. 
ಮಹಾರಾಷ್ಟ್ರದವರು ಇಲ್ಲಿ ಬಂದು ಡ್ರಗ್ಸ್ ಪತ್ತೆ ಹಚ್ಚುತ್ತಾರೆಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಹಾವೇರಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಡ್ರಗ್ಸ್ ಮುಕ್ತವಾಗಿ ಮಾರಾಟವಾಗುತ್ತಿದೆ. ಇದೇ ರೀತಿ ಮುಂದುವರೆದರೆ ಪಂಜಾಬ್ ಆದ ಹಾಗೆ ಆಗುತ್ತದೆ. ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ ಎಂದು ಹೇಳಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ: ಡಿಕೆ ಶಿವಕುಮಾರ್