Publish Date: Thu, 04 Jul 2024 (14:54 IST)
Updated Date: Thu, 04 Jul 2024 (14:57 IST)
ಉಡುಪಿ: ಹೃದಯಘಾತಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಇಂದು ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ.
ಮೃತ ಬಾಲಕಿ ಭಾಗಶ್ರೀ(10) ಮೂಡುಬೆಳ್ಳೆಯ ಸಂತ6 ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು . ಮೃತ ಬಾಲಕಿ ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ ಚಂದ್ರಿಕಾ ದಂಪತಿ ಪುತ್ರಿ.
ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯನ್ನು ಉಡುಪಿಉ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನೂ ರಾಜ್ಯದಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸಣ್ಣ ಪ್ರಾಯದವರಲ್ಲೂ ಹೃದಯ ಸಂಬಂಧಿ ಕಾಯಿಲೆಗಳು ಶುರುವಾಗುತ್ತಿರುವುದು ಆತಂಕ ಮೂಡಿಸಿದೆ.