Select Your Language

Notifications

webdunia
webdunia
webdunia
webdunia

ಉಡುಪಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗಳು ಅರೆಸ್ಟ್

ಉಡುಪಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗಳು ಅರೆಸ್ಟ್
ಉಡುಪಿ , ಮಂಗಳವಾರ, 6 ಜೂನ್ 2017 (16:19 IST)
ಕುಂದಾಪುರ ತಾಲೂಕಿನ ಅಮಾಸೆಬೈಲ್ ನಿವಾಸಿಯಾಗಿರುವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
 
ಮೂವರು ಯುವಕರು ಪ್ರೀತಿಸುವಂತೆ ನೀಡುತ್ತಿದ್ದ ಕಿರುಕುಳ ತಾಳದೇ ಯುವತಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಂತರ ಹೀನ ಕೃತ್ಯ ಬಹಿರಂಗವಾಗಿದೆ.
 
ವಿಷ ಸೇವಿಸಿದ ಯುವತಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಪೋಷಕರು ಆರೋಪಿಗಳ ವಿರುದ್ಧ ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಆರೋಪಿ ಯುವಕರಾದ ಪ್ರಸಾದ್ ಹೆಗ್ಡೆ, ಪ್ರಶಾಂತ್ ಹೆಗ್ಡೆ ಮತ್ತು ವಿನಯ್ ಶೆಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮರ್ಮಾಂಗ ದರ್ಶನ ಮಾಡಿಸಿ ಹದಿಹರೆಯದ ಬಾಲಕರ ಜೊತೆ ರತಿಕ್ರೀಡೆ ನಡೆಸಿದ್ದ ನಿರೂಪಕಿ..!