Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಉಡುಪಿಯಲ್ಲೊಬ್ಬ ಕಾಮುಕ ಮುಖ್ಯಶಿಕ್ಷಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಉಡುಪಿಯಲ್ಲೊಬ್ಬ ಕಾಮುಕ ಮುಖ್ಯಶಿಕ್ಷಕ
ಉಡುಪಿ , ಗುರುವಾರ, 31 ಜುಲೈ 2014 (16:16 IST)
ಜಿಲ್ಲೆಯ ಕಾರ್ಕಳನ ಹೆಬ್ರಿ ಬಳಿಯ ಶಿವಪುರ ಗ್ರಾಮದಲ್ಲಿರುವ  ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿದ್ದ ವೆಂಕಟರಮಣ್ ಕಲ್ಮೂರ್ ಎನ್ನುವ ಆರೋಪಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
 
ವಿದ್ಯಾರ್ಥಿನಿಯರಿಗೆ ಸ್ಪೆಷಲ್ ಕ್ಲಾಸ್ ಎಂದು ಕರೆಸಿಕೊಂಡ ಮುಖ್ಯ ಶಿಕ್ಷಕ ಅವರ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ 10ನೇ ತರಗತಿಯಲ್ಲಿ ಓದುತ್ತಿದ್ದ ನಾಲ್ಕು ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಶೋಷಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಶಾಲೆಯ ಗಣಿತ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನಾಗಿದ್ದ ಆರೋಪಿ ಶಾಲೆಯ ಬಾಗಿಲು ಹಾಕಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
 
ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಿಂದಿ ಶಿಕ್ಷಕಿ ಪದ್ಮಾವತಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೆಟ್ಟಿಗೆ ಮಾಹಿತಿಯಿದ್ದರೂ ಕೂಡಾ ಪೊಲೀಸರಿಗೆ ಮಾಹಿತಿ ನೀಡದಿರುವ ಆರೋಪದ ಮೇಲೆ ಬಂಧಿಸಲಾಗಿದೆ.
 
ಆರೋಪಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್  ಅದಿಕಾರಿಗಳು ತಿಳಿಸಿದ್ದಾರೆ.   

Share this Story:

Follow Webdunia kannada