Publish Date: Sat, 19 Aug 2023 (16:00 IST)
Updated Date: Sat, 19 Aug 2023 (15:21 IST)
ಮೆಜೆಸ್ಟಿಕ್ ರೈಲಿನ ಇಂಜಿನ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದಾರೆ.ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಆಗಮಿಸಿದ್ದು,ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ.