Publish Date: Wed, 23 Jan 2019 (11:14 IST)
Updated Date: Wed, 23 Jan 2019 (11:21 IST)
ಚಿಂಚೊಳಿ : ಕಾಂಗ್ರೆಸ್ ನ ಅತೃಪ್ತ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ್ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುಳಿವನ್ನು ಇದೀಗ ಮಾಜಿ ಸಚಿವರೊಬ್ಬರು ನೀಡಿದ್ದಾರೆ.
ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆ ಯಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಹೇಳಿಕೆಯಲ್ಲಿ ಕೆಲವೇ ದಿನಗಳಲ್ಲಿ ಲೋಕಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಾಧವ್ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ ಎಂದಿದ್ದಾರೆ.
ಇದೇ ವೇಳೆ ಅವರು, ‘ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ವ್ಯಾಮೋಹದಿಂದ ಕರ್ನಾಟಕದಲ್ಲಿ ಕೋಲಿ ಸಮಾಜ ಸರ್ವನಾಶವಾಗಿದೆ ಅಂತ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ