ನಾನು ಬಿಜೆಪಿಯಿಂದ 50 ಕೋಟಿ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಮಾಣ ಮಾಡಿ ಹೇಳಲಿ- ಪ್ರೀಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

Webdunia
ಗುರುವಾರ, 14 ಮಾರ್ಚ್ 2019 (12:30 IST)
ಕಲಬುರಗಿ : ಜಾಧವ್ ಬಿಜೆಪಿಗೆ ಹೋಗುವುದಕ್ಕೆ 50 ಕೋಟಿ ಹಣ ತೆಗೆದುಕೊಂಡಿದ್ದಾರೆ ಎಂದು ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೀಯಾಂಕ್ ಖರ್ಗೆ ಅವರ ಅಪ್ಪ-ಅಮ್ಮ ಮತ್ತು ಮಕ್ಕಳ ಮೇಲೆ ಆಣೆ ಮಾಡಲಿ. ನಾನು ಬೇಕಾದವರ ಮೇಲೆ ಆಣೆ ಮಾಡಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸಂಭವನೀಯ ಅಭ್ಯರ್ಥಿ ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ.


ಕಲಬುರಗಿಯಲ್ಲಿ ಮಾತನಾಡಿದ ಉಮೇಶ ಜಾಧವ್, ಸುಮ್ಮನೆ ಕೆಳಮಟ್ಟದ ರಾಜಕಾರಣ ಮಾಡಬಾರದು. ಅವರು ಸರ್ಕಾರದ ಬಗ್ಗೆ, ಪೃಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೂ ಟೀಕೆ ಮಾಡುತ್ತಿದ್ದಾರೆ. ನಾನು ಬಿಜೆಪಿಯಿಂದ 50 ಕೋಟಿ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಮಾಣ ಮಾಡಿ ಹೇಳಲಿ. ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ನಾನು ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.


ಇದುವರೆಗೆ ಆಗದ ಅಭಿವೃದ್ದಿ ಒಂದೇ ವರ್ಷದಲ್ಲಿ ಮಾಡಿ ತೋರಿಸುವೆ. ನಮ್ಮಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಸ್ಪೀಕರ್ ಒಬ್ಬ ಪ್ರಿನ್ಸಿಪಲ್ ವ್ಯಕ್ತಿಯಾಗಿದ್ದು, ಅವರ ಮೇಲೆ ನಂಬಿಕೆ ಇದೆ. ಇದನ್ನು ಅವರನ್ನು ಖುಷಿ ಪಡಿಸಲು ಹೇಳುತ್ತಿಲ್ಲ. ಆರು ವರ್ಷದಿಂದ ಅವರನ್ನು ನಾನು ಕಂಡಿದ್ದೇನೆ. ಹೀಗಾಗಿ ಹೃದಯದಿಂದ ಈ ಮಾತು ಹೇಳುತ್ತಿದ್ದೇನೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಉಮೇಶ್ ಜಾಧವ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments