Daily Horoscope

Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಬಿಗ್ ಶಾಕ್ ನೀಡಿದ ಶಾಸಕ ಉಮೇಶ್ ಜಾಧವ್

ಮುಂಬೈ
ಕಲಬುರಗಿ : ಕೊನೆಗೂ ಮುಂಬೈನಿಂದ ಸ್ವಗ್ರಾಮ ಬೆಡಸೂರಿಗೆ ಆಗಮಿಸಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಇದೀಗ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.


ಅತೃಪ್ತ ಶಾಸಕರಲ್ಲಿ ಒಬ್ಬರಾದ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೂ ಸಿಗದೆ ಮುಂಬೈ ನಲ್ಲಿ ಇದ್ದರು, ಅಲ್ಲದೇ ಕಾಂಗ್ರೆಸ್ ನ ಶಾಸಕಾಂಗ ಸಭೆಗೂ ಆಗಮಿಸಿರಲಿಲ್ಲ. ಈ ಎಲ್ಲಾ ವಿದ್ಯಾಮಾನಗಳನ್ನು ಗಮನಿಸಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನಲಾಗಿತ್ತು.


ಆದರೆ ಇದೀಗ ಸ್ವಗ್ರಾಮಕ್ಕೆ ಆಗಮಿಸಿದ ಶಾಸಕ ಸುದ್ಧಿಗಾರರೊಂದಿಗೆ ಮಾತನಾಡಿ,’ನನ್ನನ್ನು ಯಾರು ಖರೀದಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಆದರೆ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ್ದು ಸರಿಯಲ್ಲ. ಅನಾರೋಗ್ಯದಿಂದ ಶಾಸಕಾಂಗ ಸಭೆಗೆ ಹಾಜರಾಗಲಿಲ್ಲ’ ಎಂದು ಹೇಳುವ ಮೂಲಕ ಬಿಜೆಪಿಗೆ ಬಿಗ್ ಶಾಕ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ದರ ನೀತಿಯನ್ನು ಖಂಡಿಸಿ ಇಂದು ರಾಜ್ಯವ್ಯಾಪಿ ಕೇಬಲ್‌ ಬಂದ್‌