Publish Date: Fri, 13 Dec 2019 (11:13 IST)
Updated Date: Fri, 13 Dec 2019 (11:14 IST)
ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಉಮೇಶ್ ಕತ್ತಿ ಅವರು ಇಂದು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಉಮೇಶ್ ಕತ್ತಿಯವರು ಉಪಚುನಾವಣೆಯ ಬಳಿಕ ಈಗಾಗಲೇ ನಿವಾಸ, ವಿಧಾನಸೌಧದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಮೂರನೇ ಬಾರಿ ಸಿಎಂ ಅವರನ್ನು ಭೇಟಿ ಮಾಡಿದ್ದು, ತಮಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.