Publish Date: Fri, 08 Dec 2017 (14:09 IST)
Updated Date: Fri, 08 Dec 2017 (14:11 IST)
ಬಿಜೆಪಿ ನಾಯಕರು ಹರಾಮ್‌ಕೋರರು ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ವಾಗ್ದಾಳಿ ನಡೆಸಿದ್ದಾರೆ.
ನಾನೊಬ್ಬ ಲಿಂಗಾಯುತ, ಪ್ರತ್ಯೇಕ ಲಿಂಗಾಯುತ ಹೋರಾಟಕ್ಕೆ ಧುಮುಕದಂತೆ ಬಿಜೆಪಿ ನಾಯಕರು ತಡೆದಿದ್ದರು ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ಉಮೇಶ್ ಕತ್ತಿಯವರನ್ನು ಭೇಟಿ ಮೀಡಿದ ನಂತರ ಇಂತಹ ಬೆಳವಣಿಗೆಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಪಾಲ್ಗೊಂಡಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆಯುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು ನನಗೆ ತಿಳಿಸಿದ್ದರು ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.
ಉಮೇಶ್ ಕತ್ತಿ ಬಿಜೆಪಿ ನಾಯಕರ ವಿರುದ್ಧ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅವರ ಹೇಳಿಕೆಗೆ ಅವರೇ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.