Publish Date: Sat, 09 Dec 2017 (09:43 IST)
Updated Date: Sat, 09 Dec 2017 (09:45 IST)
ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಪ್ರತ್ಯುತ್ತರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸುತ್ತಿದ್ದು, ಆದ್ದರಿಂದ ಬೆಳಗಾವಿಯಲ್ಲಿ ಬಿಜೆಪಿಯ ಮಾಜಿ ಸಚಿವರಾದ ಉಮೇಶ್ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾಂಗ್ರೆಸ್‌ಗೆ ಸೆಳೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸೋದರ ರಮೇಶ್ ಜಾರಕಿಹೊಳಿಯನ್ನು ಸಚಿವರನ್ನಾಗಿ ಮಾಡಿದ ದಿನದಿಂದ ಅಸಮಾಧಾನಗೊಂಡಿರುವ ಸತೀಶ ಜಾರಕಿಹೊಳಿ ಸಚಿವ ಸ್ಥಾನ ಕಳೆದುಕೊಂಡ ದಿನದಿಂದ ಸಿಎಂ ವಿರುದ್ಧವೇ ಹೇಳಿಕೆ ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ. ಸತೀಶ್ ಜಾರಕಿಹೊಳಿಗೆ ಬಿಸಿ ಮುಟ್ಟಿಸಲು ಬೆಳಗಾವಿಯಲ್ಲಿ ಬಿಜೆಪಿಯನ್ನು ದುರ್ಬಲವಾಗಿಸುವ ಪ್ರಯತ್ನ ನಡೆಸಿದ್ದಾರೆ.
ಬಿಜೆಪಿ ಪಕ್ಷದ ಸಕ್ರೀಯ ಚಟುವಟಿಕೆಯಿಂದ ದೂರುವಿರುವ ಬೆಳಗಾವಿ ಭಾಗದಲ್ಲಿ ಪ್ರಭಾವಿ ಬಿಜೆಪಿ ನಾಯಕರಾದ ಮಾಜಿ ಸಚಿವರಾದ ಉಮೇಶ್ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾಂಗ್ರೆಸ್‌ಗೆ ಸೆಳೆಯುವ ಯತ್ನವನ್ನು ಸಿದ್ದರಾಮಯ್ಯ ನಡೆಸಿದ್ದಾರೆ. ಆದ್ದರಿಂದ ಅಧಿವೇಶನ ಸಂದರ್ಭದಲ್ಲಿ ಉಮೇಶ ಕತ್ತಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.